Jeremiah 50:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, ಅಊಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
Kannada BSI Bible 2016
ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,