Jeremiah 50:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶಬರ್ಯವು ಸೂರೆಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
Kannada BSI Bible 2016
ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
Kannada Bible (KNCL) BSI 2016
ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.