Jeremiah 50:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಘತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
Kannada BSI Bible 2016
ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
Kannada Bible (KNCL) BSI 2016
ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.