Jeremiah 50:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
Kannada BSI Bible 2016
ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಹಕ್ಕೆಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ನಿವಾಸಸ್ಥಳವಾಗದು, ತಲತಕಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು.
Kannada Bible (KNCL) BSI 2016
ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.