Jeremiah 50:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಘಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
Kannada BSI Bible 2016
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.