Jeremiah 50:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಬಾಬಿಲೋನಿನ ವಿರುದ್ಧ ಮಾಡಙೇಕೆಂದಿರುವುದನ್ನು ಕೇಳಿರಿ. ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
Kannada BSI Bible 2016
ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು.
Kannada Bible (KNCL) BSI 2016
ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.