Jeremiah 50:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಘಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
Kannada BSI Bible 2016
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.
Kannada Bible (KNCL) BSI 2016
ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.