Jeremiah 51:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
Kannada BSI Bible 2016
ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
Kannada Bible (KNCL) BSI 2016
‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’