Jeremiah 51:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಙೇಕೆಂಘ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
Kannada BSI Bible 2016
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!
Kannada Bible (KNCL) BSI 2016
ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.