Jeremiah 51:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.
Kannada Bible (KNCL) BSI 2016
ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.