Jeremiah 51:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಪ್ರಿಯತಮತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
Kannada BSI Bible 2016
ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.