Jeremiah 51:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
Kannada BSI Bible 2016
ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
Kannada Bible (KNCL) BSI 2016
ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.