Jeremiah 51:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
Kannada BSI Bible 2016
ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಜನರನ್ನು ಬಾಬೆಲಿಗೆ ಕಳುಹಿಸುವೆನು, ಅವರು ಅದನ್ನು ತೂರುವರು, ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯವಿುತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
Kannada Bible (KNCL) BSI 2016
ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು. ಅವರು ಅದನ್ನು ಗಾಳಿಗೆ ತೂರಿಬಿಡುವರು. ನಿಯಮಿತ ವಿಪತ್ಕಾಲದಲ್ಲಿ ಆ ದೇಶಕ್ಕೆ ಮುತ್ತಿಗೆ ಹಾಕಿ ಅದನ್ನು ಬಟ್ಟಬರಿದು ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.