Jeremiah 51:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಊಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಊಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
Kannada BSI Bible 2016
ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದಕ್ಕೆ ವಿರುದ್ಧವಾಗಿ ಸನ್ನಾಹಮಾಡಿರಿ.
Kannada Bible (KNCL) BSI 2016
ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.