Jeremiah 51:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋವಿನಿಂದಲೋ ಎಂಘಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಙೇಕೆಂಬುದು ಯೆಹೋವನ ಯೋಜನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
Kannada BSI Bible 2016
ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
Kannada Bible (KNCL) BSI 2016
ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.