Jeremiah 51:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಙೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
Kannada BSI Bible 2016
ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅವರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
Kannada Bible (KNCL) BSI 2016
ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.