Jeremiah 51:43 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.
Kannada Bible (KNCL) BSI 2016
ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.