Jeremiah 51:46 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಘಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
Kannada Bible (KNCL) BSI 2016
ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು.