Jeremiah 51:47 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
Kannada Bible (KNCL) BSI 2016
ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.