Jeremiah 51:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
Kannada BSI Bible 2016
ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
Kannada Bible (KNCL) BSI 2016
ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ.