Jeremiah 51:52 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
Kannada Bible (KNCL) BSI 2016
ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.