Jeremiah 51:55 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಬಾಬಿಲೋನನ್ನು ಘಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಬಲು ಗದ್ದಲವನ್ನು ಅಣಗಿಸಿಬಿಡುತ್ತಾನೆ; ಮಹಾಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
Kannada Bible (KNCL) BSI 2016
ಬಾಬಿಲೋನನ್ನು ನಾನು ಹಾಳುಮಾಡಿಬಿಡುತ್ತೇನೆ ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತೇನೆ. ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ಅಲೆ ಅಲೆಯಾಗಿ ಬಂದ ಶತ್ರುಗಳು ಘೋಷಿಸಿ ಆರ್ಭಟಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು.