Jeremiah 51:58 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಘಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತಐದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”