Jeremiah 51:62 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ ಎಂಬದಾಗಿ ಅರಿಕೆಮಾಡಬೇಕು.
Kannada Bible (KNCL) BSI 2016
ಬಳಿಕ, ‘ಸರ್ವೇಶ್ವರಾ, ನೀವು ಈ ಸ್ಥಳವನ್ನು ನಿರ್ಮೂಲಮಾಡಲು ಉದ್ದೇಶಿಸಿ, ಇದು ಜನರಿಗೂ ಜಾನುವಾರುಗಳಿಗೂ ನೆಲೆಯಾಗದೆ ಸದಾಕಾಲ ಹಾಳಾಗಿಯೇ ಉಳಿಯಲಿ ಎಂದು ನುಡಿದಿದ್ದೀರಲ್ಲಾ!’ ಎಂದು ಅರಿಕೆಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.