Jeremiah 51:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನ್ ಯೆಹೋವನ ಕೈಯಲ್ಲಿನ ಘಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
Kannada BSI Bible 2016
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
Kannada Bible (KNCL) BSI 2016
ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.