Jeremiah 52:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಘಐ ಪಟ್ಟಣದ ನಿವಾಸಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
Kannada BSI Bible 2016
All Text in Chapter 52 is in chapters before Chapter 52
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.