Jeremiah 52:10 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಿಘ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಊಕಾರಿಗಳನ್ನು ಸಹ ಕೊಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
Kannada Bible (KNCL) BSI 2016
ಆ ಅರಸನು ಚಿದ್ಕೀಯನಿಗೆ ಶಿಕ್ಷೆ ವಿಧಿಸಿ ಅವನ ಮಕ್ಕಳನ್ನು ಅವನ ಕಣ್ಣೆದುರಿಗೆ ವಧಿಸಿದ. ಜುದೇಯದ ಎಲ್ಲ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದನು.