Jeremiah 52:11 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು ಅವನಿಗೆ ಬೇಡಿ ಹಾಕಿ ಬಾಬೆಲಿಗೆ ತೆಗೆದುಕೊಂಡು ಹೋಗಿ ಅವನು ಜೀವದಿಂದಿರುವವರೆಗೆ ಸೆರೆಯಲ್ಲಿ ಇಟ್ಟನು.
Kannada Bible (KNCL) BSI 2016
ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.