Jeremiah 52:12 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನ ಆಳಿಬಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಜೆರುಸಲೇಮಿಗೆ ಬಂದನು. ನೆಘೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು
Kannada Bible (KNCL) BSI 2016
ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,