Jeremiah 52:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕೆಲವು ಜನ ಕಡುಘಡವರನ್ನು ನೆಘೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.
Kannada Bible (KNCL) BSI 2016
ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೆಬೂಜರದಾನನು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.