Jeremiah 52:19 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ವಿಶೇಷ ರಕ್ಷಕದಳದ ಅಊಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಘಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
Kannada Bible (KNCL) BSI 2016
ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.