Jeremiah 52:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಕಂಚಿನ ಕಂಘ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಘ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಬಗಳು ಎಂಥವುಗಳಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ಹೊಳ್ಳು, ನಾಲ್ಕು ಬೆರಳು ದಪ್ಪವಾಗಿತ್ತು.
Kannada Bible (KNCL) BSI 2016
ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು. ಅದರ ಸುತ್ತಳತೆ 5:3 ಮೀಟರ್. ಅದರ ಒಳಭಾಗ ಹೊಳ್ಳಾಗಿತ್ತು. ಆ ಲೋಹ ನಾಲ್ಕು ಬೆರಳು ದಪ್ಪವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು, ಅದರ ಸುತ್ತಳತೆ ಸುಮಾರು ಐದು ಮೀಟರ್.