Jeremiah 52:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲನೇ ಕಂಘದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಘವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಘದಲ್ಲಿಯೂ ದಾಳಿಂಬೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಘದಂತೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು. ಎರಡನೆಯ ಕಂಬವು ದಾಳಿಂಬಹಣ್ಣುಗಳಿಂದ ಅಲಂಕಾರವಾಗಿ ಹಾಗೆಯೇ ಇತ್ತು.
Kannada Bible (KNCL) BSI 2016
ಕಂಬದ ಮೇಲೆ 2:2 ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೆ ಅಲಂಕಾರವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಂಬದ ಮೇಲೆ ಎತ್ತರವಾದ ಒಂದು ಕಂಚಿನ ಕುಂಭವಿತ್ತು, ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೇ ಅಲಂಕಾರವಾಗಿತ್ತು.