Jeremiah 52:24 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ವಿಶೇಷ ರಕ್ಷಕದಳದ ಅಊಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,
Kannada Bible (KNCL) BSI 2016
ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.