Jeremiah 52:25 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ವಿಶೇಷ ರಕ್ಷಕದಳದ ಅಊಪತಿಯು ಸೈನ್ಯದ ವ್ಯವಸ್ಥಾಪಕನ ಅಊಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.
Kannada Bible (KNCL) BSI 2016
ಅವನು ನಗರದಿಂದ ಸೈನ್ಯಸಂಬಂಧವಾದ ಎಲ್ಲ ವ್ಯವಸ್ಥೆಯನ್ನೂ ಮಾಡುವ ಕಂಚುಕಿಯನ್ನು, ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.