Jeremiah 52:31 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನೆಐರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
Kannada Bible (KNCL) BSI 2016
ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.