Jeremiah 52:4 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಚಿದ್ಕೀಯನು ತನ್ನ ಆಳಿಬಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಘೂಕದೆಐಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ
Kannada Bible (KNCL) BSI 2016
ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.