Jeremiah 52:8 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.
Kannada Bible (KNCL) BSI 2016
ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.