Jeremiah 52:9 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಘ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಘ್ಲವು ಹಮಾತ್ ಪ್ರದೇಶದಲ್ಲಿದೆ. ರಿಘ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ
Kannada Bible (KNCL) BSI 2016
ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.