Jeremiah 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಙೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
Kannada BSI Bible 2016
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.
Kannada Bible (KNCL) BSI 2016
ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.