Jeremiah 6:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
Kannada BSI Bible 2016
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
Kannada Bible (KNCL) BSI 2016
ಅದಕ್ಕೆ ನಾನು, “ಅಯ್ಯೋ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ. ಅವರು ಕೇಳಿಸಿಕೊಳ್ಳುವುದಿಲ್ಲ. ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.