Jeremiah 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
Kannada BSI Bible 2016
ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹೆಂಡತಿ, ಮನೆ, ಹೊಲಗದ್ದೆ ಇವೆಲ್ಲಾ ಅನ್ಯರ ಪಾಲಾಗುವವು; ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
Kannada Bible (KNCL) BSI 2016
ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.