Jeremiah 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
Kannada BSI Bible 2016
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
Kannada Bible (KNCL) BSI 2016
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.