Jeremiah 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ಒಳ್ಳೆಯ ರಸ್ತೆ ಎಲ್ಲಿದೆ? ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ” ಎಂದು ನೀವು ಹೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
Kannada BSI Bible 2016
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ: “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು: “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.