Jeremiah 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
Kannada BSI Bible 2016
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
Kannada Bible (KNCL) BSI 2016
ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.