Jeremiah 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಘ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಘಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
Kannada BSI Bible 2016
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.
Kannada Bible (KNCL) BSI 2016
ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”