Jeremiah 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಘಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
Kannada BSI Bible 2016
ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
Kannada Bible (KNCL) BSI 2016
ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.