Jeremiah 6:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಘಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಘ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಓ ಚೀಯೋನಿನ ಪುತ್ರಿಯೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.”