Jeremiah 6:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಘಳಲುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
Kannada BSI Bible 2016
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು. ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
Kannada Bible (KNCL) BSI 2016
ಜೆರುಸಲೇಮಿನ ಜನರು: “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.