Jeremiah 6:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಘಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಘಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
Kannada BSI Bible 2016
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.
Kannada Bible (KNCL) BSI 2016
ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.